ಅಪೊಸ್ತಲರ ಕಾರ್ಯಗಳು 2:46-47
ಅಪೊಸ್ತಲರ ಕಾರ್ಯಗಳು 2:46-47 KERV
ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು. ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.