1
ಯೋಹಾ 11:25-26
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ
Yenzanisa
Ongorora {{vhesi}}
2
ಯೋಹಾ 11:40
ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
3
ಯೋಹಾ 11:35
ಯೇಸು ಕಣ್ಣೀರಿಟ್ಟನು.
4
ಯೋಹಾ 11:4
ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
5
ಯೋಹಾ 11:43-44
ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
6
ಯೋಹಾ 11:38
ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
7
ಯೋಹಾ 11:11
ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
Pekutangira
Bhaibheri
Zvirongwa
Mavideo