ಆದಿಕಾಂಡ 6:1-4

ಆದಿಕಾಂಡ 6:1-4 KERV

ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು. ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.

YouVersion använder cookies för att anpassa din upplevelse. Genom att använda vår webbplats accepterar du vår användning av cookies enligt beskrivningen i vår Integritetspolicy