ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು. ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.