ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು. ಯೇಸು ಆಕೆಗೆ, “ಮಗಳೇ, ನೀನು ನಂಬಿದ್ದರಿಂದ ನಿನಗೆ ಸ್ವಸ್ಥವಾಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.