1
ಆದಿಕಾಂಡ 3:6
ಕನ್ನಡ ಸತ್ಯವೇದವು C.L. Bible (BSI)
ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.
Thelekisa
Phonononga ಆದಿಕಾಂಡ 3:6
2
ಆದಿಕಾಂಡ 3:1
ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.
Phonononga ಆದಿಕಾಂಡ 3:1
3
ಆದಿಕಾಂಡ 3:15
ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”
Phonononga ಆದಿಕಾಂಡ 3:15
4
ಆದಿಕಾಂಡ 3:16
ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."
Phonononga ಆದಿಕಾಂಡ 3:16
5
ಆದಿಕಾಂಡ 3:19
ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."
Phonononga ಆದಿಕಾಂಡ 3:19
6
ಆದಿಕಾಂಡ 3:17
ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.
Phonononga ಆದಿಕಾಂಡ 3:17
7
ಆದಿಕಾಂಡ 3:11
“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.
Phonononga ಆದಿಕಾಂಡ 3:11
8
ಆದಿಕಾಂಡ 3:24
ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.
Phonononga ಆದಿಕಾಂಡ 3:24
9
ಆದಿಕಾಂಡ 3:20
ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ .
Phonononga ಆದಿಕಾಂಡ 3:20
Ekuqaleni
IBhayibhile
Izicwangciso
Iividiyo