1
ಆದಿಕಾಂಡ 13:15
ಪರಿಶುದ್ದ ಬೈಬಲ್
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.
Ṣe Àfiwé
Ṣàwárí ಆದಿಕಾಂಡ 13:15
2
ಆದಿಕಾಂಡ 13:14
ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.
Ṣàwárí ಆದಿಕಾಂಡ 13:14
3
ಆದಿಕಾಂಡ 13:16
ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.
Ṣàwárí ಆದಿಕಾಂಡ 13:16
4
ಆದಿಕಾಂಡ 13:8
ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
Ṣàwárí ಆದಿಕಾಂಡ 13:8
5
ಆದಿಕಾಂಡ 13:18
ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.
Ṣàwárí ಆದಿಕಾಂಡ 13:18
6
ಆದಿಕಾಂಡ 13:10
ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)
Ṣàwárí ಆದಿಕಾಂಡ 13:10
Ilé
Bíbélì
Àwon ètò
Àwon Fídíò