ಆದಿಕಾಂಡ 8:21-22

ಆದಿಕಾಂಡ 8:21-22 KERV

ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ. ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.