1
ಆದಿ 6:6
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
对照
探索 ಆದಿ 6:6
2
ಆದಿ 6:5
ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
探索 ಆದಿ 6:5
3
ಆದಿ 6:8
ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
探索 ಆದಿ 6:8
4
ಆದಿ 6:9
ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
探索 ಆದಿ 6:9
5
ಆದಿ 6:7
ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
探索 ಆದಿ 6:7
6
ಆದಿ 6:1-4
ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು. ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
探索 ಆದಿ 6:1-4
7
ಆದಿ 6:22
ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.
探索 ಆದಿ 6:22
8
ಆದಿ 6:13
ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
探索 ಆದಿ 6:13
9
ಆದಿ 6:14
ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
探索 ಆದಿ 6:14
10
ಆದಿ 6:12
ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
探索 ಆದಿ 6:12
11
ಆದಿ 6:19
ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
探索 ಆದಿ 6:19
主页
圣经
计划
视频