ಆದಿ 6

6
ಮನುಷ್ಯರ ಕೆಟ್ಟತನ
1ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು 2ಸೌಂದರ್ಯವುಳ್ಳವರಾಗಿರುವುದನ್ನು ನೋಡಿ #6:2 ಪರಲೋಕದ ಆತ್ಮಗಳು.ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು. 3ಆಗ ಯೆಹೋವನು, “#6:3 ಜೀವವನ್ನು ನೀಡುವ ಆತ್ಮ.ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
4ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
5ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. 6ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
7ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. 8ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
ನೋಹನ ಚರಿತ್ರೆ
9ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು. 10ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು. 12ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
13ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ. 14ನೀನು ನಿನಗೋಸ್ಕರ ತುರಾಯಿ ಮರದಿಂದ #6:14 ಪೆಟ್ಟಿಗೆ ಅಥವಾ ಮಂಜೂಷ.ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು. 15ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. 16ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. 17ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
18“ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು. 19ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು. 20ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು. 21ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
22ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

目前选定:

ಆದಿ 6: IRVKan

高亮显示

分享

复制

None

想要在所有设备上保存你的高亮显示吗? 注册或登录