1
ಆದಿಕಾಂಡ 15:6
ಕನ್ನಡ ಸತ್ಯವೇದವು C.L. Bible (BSI)
ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.
對照
ಆದಿಕಾಂಡ 15:6 探索
2
ಆದಿಕಾಂಡ 15:1
ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".
ಆದಿಕಾಂಡ 15:1 探索
3
ಆದಿಕಾಂಡ 15:5
ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.
ಆದಿಕಾಂಡ 15:5 探索
4
ಆದಿಕಾಂಡ 15:4
ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.
ಆದಿಕಾಂಡ 15:4 探索
5
ಆದಿಕಾಂಡ 15:13
ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.
ಆದಿಕಾಂಡ 15:13 探索
6
ಆದಿಕಾಂಡ 15:2
ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ
ಆದಿಕಾಂಡ 15:2 探索
7
ಆದಿಕಾಂಡ 15:18
ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”
ಆದಿಕಾಂಡ 15:18 探索
8
ಆದಿಕಾಂಡ 15:16
ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.
ಆದಿಕಾಂಡ 15:16 探索
主頁
聖經
計劃
影片