1
ಲೂಕ. 13:24
ಕನ್ನಡ ಸತ್ಯವೇದವು C.L. Bible (BSI)
ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.
對照
ಲೂಕ. 13:24 探索
2
ಲೂಕ. 13:11-12
ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ
ಲೂಕ. 13:11-12 探索
3
ಲೂಕ. 13:13
ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.
ಲೂಕ. 13:13 探索
4
ಲೂಕ. 13:30
“ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.
ಲೂಕ. 13:30 探索
5
ಲೂಕ. 13:25
ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.
ಲೂಕ. 13:25 探索
6
ಲೂಕ. 13:5
ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.
ಲೂಕ. 13:5 探索
7
ಲೂಕ. 13:27
ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.
ಲೂಕ. 13:27 探索
8
ಲೂಕ. 13:18-19
ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.
ಲೂಕ. 13:18-19 探索
主頁
聖經
計劃
影片