1
ಲೂಕ. 16:10
ಕನ್ನಡ ಸತ್ಯವೇದವು C.L. Bible (BSI)
ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.
對照
ಲೂಕ. 16:10 探索
2
ಲೂಕ. 16:13
“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.
ಲೂಕ. 16:13 探索
3
ಲೂಕ. 16:11-12
ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?
ಲೂಕ. 16:11-12 探索
4
ಲೂಕ. 16:31
ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”
ಲೂಕ. 16:31 探索
5
ಲೂಕ. 16:18
ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”
ಲೂಕ. 16:18 探索
主頁
聖經
計劃
影片