1
ಲೂಕ. 20:25
ಕನ್ನಡ ಸತ್ಯವೇದವು C.L. Bible (BSI)
ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ, ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು.
對照
ಲೂಕ. 20:25 探索
2
ಲೂಕ. 20:17
ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?
ಲೂಕ. 20:17 探索
3
ಲೂಕ. 20:45-46-47
ಜನರೆಲ್ಲರು ಕಿವಿಗೊಟ್ಟು ಕೇಳುತ್ತಿದ್ದಂತೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ನೋಡಿ, “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆಬೀದಿಗಳಲ್ಲಿ ತಮಗೆ ವಂದನೋಪಚಾರ ಸಲ್ಲಬೇಕೆಂದು ಆಶಿಸುತ್ತಾರೆ; ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಅಪೇಕ್ಷಿಸುತ್ತಾರೆ. ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.
ಲೂಕ. 20:45-46-47 探索
主頁
聖經
計劃
影片