YouVersion 標誌
搜尋圖標

ಲೂಕ. 20:45-47

ಲೂಕ. 20:45-47 KANCLBSI

ಜನರೆಲ್ಲರು ಕಿವಿಗೊಟ್ಟು ಕೇಳುತ್ತಿದ್ದಂತೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ನೋಡಿ, “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆಬೀದಿಗಳಲ್ಲಿ ತಮಗೆ ವಂದನೋಪಚಾರ ಸಲ್ಲಬೇಕೆಂದು ಆಶಿಸುತ್ತಾರೆ; ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಅಪೇಕ್ಷಿಸುತ್ತಾರೆ. ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.