YouVersion 標誌
搜尋圖標

ಆದಿಕಾಂಡ 5

5
ಆದಾಮನ ಕುಟುಂಬ ಚರಿತ್ರೆ
1ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು. 2ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
3ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು. 4ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 5ಹೀಗೆ ಆದಾಮನು ಒಟ್ಟು 930 ವರ್ಷ ಜೀವಿಸಿ ಮರಣಹೊಂದಿದನು.
6ಸೇತನು 105 ವರ್ಷದವನಾದಾಗ ಎನೋಷ್ ಎಂಬ ಮಗನನ್ನು ಪಡೆದನು. 7ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 8ಹೀಗೆ ಸೇತನು ಒಟ್ಟು 912 ವರ್ಷ ಜೀವಿಸಿ ಮರಣಹೊಂದಿದನು.
9ಎನೋಷನು 90 ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು. 10ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 11ಹೀಗೆ ಎನೋಷನು ಒಟ್ಟು 905 ವರ್ಷ ಜೀವಿಸಿ ಮರಣಹೊಂದಿದನು.
12ಕೇನಾನನು 70 ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು. 13ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 14ಹೀಗೆ ಕೇನಾನನು ಒಟ್ಟು 910 ವರ್ಷ ಜೀವಿಸಿ ಮರಣಹೊಂದಿದನು.
15ಮಹಲಲೇಲನು 65 ವರ್ಷದವನಾದಾಗ ಯೆರೆದ ಎಂಬ ಮಗನನ್ನು ಪಡೆದನು. 16ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 17ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು.
18ಯೆರೆದನು 162 ವರ್ಷದವನಾದಾಗ ಹನೋಕ ಎಂಬ ಮಗನನ್ನು ಪಡೆದನು. 19ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 20ಹೀಗೆ ಯೆರೆದನು ಒಟ್ಟು 962 ವರ್ಷ ಜೀವಿಸಿ ಮರಣಹೊಂದಿದನು.
21ಹನೋಕನು 65 ವರ್ಷದವನಾದಾಗ ಮೆತೂಷೆಲಹ ಎಂಬ ಮಗನನ್ನು ಪಡೆದನು. 22ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 23ಹೀಗೆ ಹನೋಕನು ಒಟ್ಟು 365 ವರ್ಷ ಜೀವಿಸಿದನು. 24ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.
25ಮೆತೂಷೆಲಹನು 187 ವರ್ಷದವನಾದಾಗ ಲೆಮೆಕ ಎಂಬ ಮಗನನ್ನು ಪಡೆದನು. 26ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 27ಹೀಗೆ ಮೆತೂಷೆಲಹನು ಒಟ್ಟು 969 ವರ್ಷ ಜೀವಿಸಿ ಮರಣಹೊಂದಿದನು.
28ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. 29ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.
30ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. 31ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು.
32ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.

醒目顯示

分享

複製

None

想在你所有裝置上儲存你的醒目顯示?註冊帳戶或登入