1
ಆದಿಕಾಂಡ 9:12-13
ಕನ್ನಡ ಸತ್ಯವೇದವು J.V. (BSI)
ದೇವರು ಮತ್ತೂ ಹೇಳಿದ್ದೇನಂದರೆ - ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ಎಲ್ಲಾ ತಲತಲಾಂತರಗಳಲ್ಲಿಯೂ ಮಾಡುವ ಈ ಪ್ರತಿಜ್ಞೆಗೆ ಮೇಘಗಳಲ್ಲಿ ನಾನಿಟ್ಟಿರುವ ಮುಗಿಲುಬಿಲ್ಲೇ ಗುರುತಾಗಿರುವದು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತಾಗಿರಲಿ.
對照
探尋 ಆದಿಕಾಂಡ 9:12-13
2
ಆದಿಕಾಂಡ 9:16
ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂವಿುಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು ಅಂದನು.
探尋 ಆದಿಕಾಂಡ 9:16
3
ಆದಿಕಾಂಡ 9:6
ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.
探尋 ಆದಿಕಾಂಡ 9:6
4
ಆದಿಕಾಂಡ 9:1
ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
探尋 ಆದಿಕಾಂಡ 9:1
5
ಆದಿಕಾಂಡ 9:3
ಭೂವಿುಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
探尋 ಆದಿಕಾಂಡ 9:3
6
ಆದಿಕಾಂಡ 9:2
ಭೂವಿುಯ ಮೇಲಿರುವ ಎಲ್ಲಾ ಮೃಗಗಳೂ ಆಕಾಶದ ಎಲ್ಲಾ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಗಳೂ ಸಮುದ್ರದ ಮೀನುಗಳೂ ನಿಮಗೆ ಬೆದರಿ ಅಂಜಿಕೊಳ್ಳುವವು; ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
探尋 ಆದಿಕಾಂಡ 9:2
7
ಆದಿಕಾಂಡ 9:7
ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂವಿುಯ ಮೇಲೆ ನಿಮಗೆ ಬಹು ಸಂತಾನವಾಗಲಿ ಎಂದು ಹೇಳಿದನು.
探尋 ಆದಿಕಾಂಡ 9:7
首頁
聖經
計畫
視訊