ಆದಿಕಾಂಡ 8:21-22

ಆದಿಕಾಂಡ 8:21-22 KANJV-BSI

ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ. ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು.